Friday, March 5, 2010

the song that I still sing in mind at least once in a week before I sleep...

ಅಮ್ಮ, ನಿನ್ನ ಎದೆಯಾಳದಲ್ಲಿ
ಗಾಳಕ್ಕೆ ಸಿಕ್ಕ ಮೀನು
ಮಿಡುಕಾಡುತಿರುವೆ ನಾನು
ಕಡಿಯಲೋಲ್ಲೆ ನೀ ಕರುಳಬಳ್ಳಿ
ಒಲವೂಡುತಿರುವ ತಾಯೆ,
ಬಿಡದ ಬುವಿಯ ಮಾಯೆ

ನಿನ್ನ ರಕ್ಷೆಗೂಡಲ್ಲಿ ಬೆಚ್ಚಗೆ
ಆಡಗಲಿ ಎಷ್ಟು ದಿನ ?
ದೂಡು ಹೊರಗೆ ನನ್ನ
ಓಟ ಕಲಿವೆ, ಒಳನೋಟ ಕಲಿವೆ,
ನಾಕಲಿವೆ ಊರ್ಧ್ವ ಗಮನ,
ಓ ಆಗಾಧ ಗಗನ

ಮೇಲೆ ಹಾರಿ, ನಿನ್ನ ಸೆಳೆತ ಮೀರಿ,
ನಿರ್ಭಾರಸ್ಥಿತಿಗೆ ತಲುಪಿ
ಬ್ರಹ್ಮಾಂಡವನ್ನೇ ಬೆದಕಿ
ಇಂಧನ ತೀರಲು,
ಬಂದೇ ಬರುವೆನು
ಮತ್ತೆ ನಿನ್ನ ತೊಡೆಗೆ,
ಮೂರ್ತ ಪ್ರೇಮದೆಡೆಗೆ

-ಬಿ ಆರ್ ಲಕ್ಷ್ಮಣರಾವ್.